ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯ ಶುಕ್ರವಾರ ನಡೆಯಿತು. ಸಭೆಯಲ್ಲಿ ಜಿಬಿಎ ರಚನೆ ಹಿಂದಿನ ಉದ್ದೇಶಗಳನ್ನು ಪ್ರಸ್ತಾಪಿಸಿ, ನಗರದ ಸರ್ವತೋಮುಖ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುದ್ಧ ನೀರಿನ ಪೂರೈಕೆ, ಸ್ವಚ್ಚತೆ, ಸಂಚಾರ ವ್ಯವಸ್ಥೆ ಸೇರಿದಂತೆ ಬೆಂಗಳೂರಿಗರ ಜೀವನಮಟ್ಟ ಸುಧಾರಣೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಬೆಂಗಳೂರಿನ ಅಭಿವೃದ್ಧಿ ಒಲ್ಲದವರಿಗೆ ಸಭೆಯನ್ನು ವಿರೋಧಿಸುತ್ತಾರೆ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ, ಚರಂಡಿ, ಪಾದಚಾರಿ ಮಾರ್ಗ, ಉದ್ಯಾನಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು ಎನ್ನುವ ಮಹತ್ತರ ಗುರಿ ಮತ್ತು ಉದ್ದೇಶಗಳೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.
.jpg)