ಸ್ಥಾನದ ವಿಚಾರ ಸಂಖ್ಯಾಬಲದಿಂದ ನಿರ್ಧಾರವಾಗುವುದಿಲ್ಲ, ಎಲ್ಲವನ್ನೂ ಹೈಕಮಾಂಡ್‌ ನಿರ್ಧರಿಸುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Waves of Karnataka

 


ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾರ ತೀರ್ಮಾನ ನಿರ್ಣಾಯಕ ಎಂಬ ವಿಷಯದ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಕೌಂಟರ್ ನೀಡಿದ್ದಾರೆ. ಮುಖ್ಯಮಂತ್ರಿಯಾಗಲು ಶಾಸಕರ ಬಲ ಮುಖ್ಯವಲ್ಲ. ಎಲ್ಲ ನಿರ್ಧಾರಗಳನ್ನು ಹೈಕಮಾಂಡ್‌ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿವಾಹಿನಿಗೆ ಇತ್ತೀಚೆಗೆ ಸಂದರ್ಶನ ನೀಡಿದ್ದ ಶಿವಕುಮಾರ್, ಶಾಸಕರ ಬಲಾಬಲದ ಮೇಲೆ ಮುಖ್ಯಮಂತ್ರಿ ಸ್ಥಾನ ನಿರ್ಧಾರ ಆಗುವುದಿಲ್ಲ. ಹೈಕಮಾಂಡ್ ಮಾತೇ ಅಂತಿಮ. ವರಿಷ್ಠರು ಹೇಳಿದ್ದನ್ನು ಕೇಳಬೇಕು. ಹೈಕಮಾಂಡ್‌ನವರು ಏನು ಕೆಲಸ ಕೊಡುತ್ತಾರೊ ಅದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದಿದ್ದರು. ನವೆಂಬರ್‌ನಲ್ಲಿ ಯಾವುದೇ ಕ್ರಾಂತಿಯಿಲ್ಲ.

ಅದೆಲ್ಲವೂ ಸೃಷ್ಟಿಯಷ್ಟೆ. ಕಾಂಗ್ರೆಸ್‌ ಪಕ್ಷದಲ್ಲಿ ನಿರ್ಧಾರಗಳು ಹೈಕಮಾಂಡ್‌ ಮಟ್ಟದಲ್ಲಿಯೇ ಆಗುತ್ತವೆ. ಸಂಖ್ಯಾಬಲದಿಂದ ಯಾವುದೂ ನಿರ್ಧಾರವಾಗುವುದಿಲ್ಲ. ಹೈಕಮಾಂಡ್‌ ಎಲ್ಲವನ್ನೂ ನಿರ್ಧರಿಸುತ್ತದೆ. ಯಾರನ್ನು ಎಲ್ಲಿಡಬೇಕು, ಯಾವಾಗ ಸ್ಥಾನಮಾನ ನೀಡಬೇಕು, ಎಷ್ಟು ದಿನ ಕೊಡಬೇಕು ಎಂಬುದನ್ನೂ ಸಹ ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದರು.