ರಾಜ್ಯದಲ್ಲಿ ಇಷ್ಟು ದಿನ ಸದ್ದು ಮಾಡುತ್ತಿದ್ದ ಕಾಂಗ್ರೆಸ್ ಕ್ರಾಂತಿಗೆ ಫುಲ್ ಸ್ಟಾಪ್ ಬಿದ್ದಿದ್ದು, ಸಂಪುಟ ಪುನಾರಚನೆ ಮೂಲಕ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

Waves of Karnataka


 ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಂಪುಟ ಪುನರ್ರಚನೆ ಪ್ರಸ್ತಾಪಿಸಿದ್ದು, ಈ ವೇಳೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆಸಿ ವೇಣುಗೋಪಾಲ್ ಅವರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ಅಗತ್ಯವಿದೆ ಎಂದು ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಈ ಕುರಿತ ನಿರ್ಧಾವನ್ನು ರಾಹುಲ್ ಗಾಂಧಿ ಅವರ ಮೇಲೆ ಬಿಟ್ಟಿದ್ದಾರೆ.

ಬಿಹಾರ ಚುನಾವಣೆಯಲ್ಲಿನ ಹೀನಾಯ ಸೋಲು ಕಾಂಗ್ರೆಸ್ ಪಕ್ಷದ ನಿದ್ದೆ ಕೆಡಿಸಿದ್ದು, ಸಂಪುಟ ಅಥವಾ ಸಿಎಂ ಹುದ್ದೆಯಲ್ಲಿ ಯಾವುದೇ ಬದಲಾವಣೆಯನ್ನು ನಿರ್ಧರಿಸುವ ಮೊದಲು ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ