ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, 100 ವರ್ಷಗಳಲ್ಲಿ ಮೊದಲ ಬಾರಿಗೆ ಚಿತ್ತಾಪುರದಲ್ಲಿ ಕಾನೂನು ಮತ್ತು ಸಾಂವಿಧಾನಿಕ ಅನುಮತಿಯೊಂದಿಗೆ ಪಥಸಂಚಲನ ನಡೆಸುವ ಮೂಲಕ ನಿಯಮಗಳನ್ನು ಪಾಲಿಸುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಶಾಸಕ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು (RSS) ಪಥಸಂಚಲನ ನಡೆಸುತ್ತಿದೆ.
'ನಾನು ಪಥಸಂಚಲನವನ್ನು ಎಂದಿಗೂ ವಿರೋಧಿಸಿಲ್ಲ. ನಾನು ಹೇಳಿದ್ದು ಅನುಮತಿ ಪಡೆಯಬೇಕು ಎಂದು ಮಾತ್ರ. ಅವರಿಗೆ ಕಾನೂನಿನ ನಿಯಮವನ್ನು ಪಾಲಿಸದಿರುವ ಅಭ್ಯಾಸವಿದೆ. ಈಗ ಅವರು ನಿಯಮಗಳನ್ನು ಪಾಲಿಸುತ್ತಿದ್ದಾರೆ. ಅವರು ಅದನ್ನು ಮಾಡಲಿ' ಎಂದು ಪ್ರಿಯಾಂಕ್ ಕಲಬುರಗಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
