ಅಧಿಕಾರಿ ಹಂಚಿಕೆ ಬಿಕ್ಕಟ್ಟು: 'ದಿನಕ್ಕೊಂದು ಹೇಳಿಕೆ' ನಡುವೆ ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ

Waves of Karnataka


 ಅಧಿಕಾರಿ ಹಂಚಿಕೆ ವಿಚಾರ ದಿನೇ ದಿನೇ ಕಗ್ಗಂಟಾಗುತ್ತಾ ಹೋಗುತ್ತಿದೆ. ಉಭಯದ ಬಣದ ಬೆಂಬಲಿಗರು ದಿನಕ್ಕೊಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಇದೇ ವಿಚಾರವಾಗಿ ನಟಿ, ಮಾಜಿ ಸಂಸದೆ ರಮ್ಯಾ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಧಿಕಾರ ಹಂಚಿಕೆ ವಿಚಾರ ಇದನ್ನ ನಾನು ನಿರ್ಧಾರ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ಎಂದು ರಮ್ಯಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ರಂತ ದೊಡ್ಡ ದೊಡ್ಡ ನಾಯಕರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ಪಕ್ಷದಲ್ಲಿ ಗೊಂದಲ ಹೆಚ್ಚಾಗಿದೆ ಯಾಕೆ ಎಂದು ಕೇಳಿದ್ದಕ್ಕೆ ಅದೇ ರಾಜಕೀಯ ಎಂದು ನಕ್ಕು, ಎಲ್ಲಾ ನಾಯಕರಿಗೂ ಅರ್ಹತೆ ಇದೆ. ಯಾರಾದಾರೂ ನನಗೆ ಅಭ್ಯಂತರವಿಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ