ನವೆಂಬರ್ ಕ್ರಾಂತಿ ನಡೆಯುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ. ಬದಲಿಗೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಸೂಚನೆ ನೀಡಿದೆ.

Waves of Karnataka


 ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು ಪಕ್ಷದ ಸೋಲಿನ ಕುರಿತಂತೆ ಹಿರಿಯ ನಾಯಕರು ಪರಾಮರ್ಶೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ನವೆಂಬರ್ ಕಾಂತ್ರಿ ನಡೆಯಲಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದರು. ಆದರೆ ನವೆಂಬರ್ ಕ್ರಾಂತಿ ನಡೆಯುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ. ಬದಲಿಗೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಸೂಚನೆ ನೀಡಿದೆ.

ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯನ್ನು ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.