ಕಬ್ಬು ಬೆಳೆಗಾರರ ಹೋರಾಟ ಬೇರೆ ರಾಜ್ಯಗಳಲ್ಲೇಕಿಲ್ಲ?: ರಾಜ್ಯಕ್ಕೆ ಕೇಂದ್ರ ಸರ್ಕಾರ ಪ್ರಶ್ನೆ

Waves of Karnataka


 ಕಬ್ಬು ಬೆಳೆಗಾರರ ಹೋರಾಟದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿರುವುದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಶನಿವಾರ ತೀವ್ರವಾಗಿ ಕಿಡಿಕಾರಿದ್ದು, ಇತರೆ ರಾಜ್ಯಗಳ ರೈತರೇಕೆ ಪ್ರತಿಭಟನೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ ನಿಗದಿ ಸೇರಿದಂತೆ ಹಲವು ಕಾರಣಗಳಿಗಾಗಿ ಕಬ್ಬು ಬೆಳೆಗಾರರ ಹೋರಾಟಗಳು ಕರ್ನಾಟಕದಲ್ಲಷ್ಟೇ ನಡೆಯುತ್ತಿವೆ. ಇತರೆ ಸಕ್ಕರೆ ಉತ್ಪಾದನಾ ರಾಜ್ಯಗಳಲ್ಲಿ ಏಕಿಲ್ಲ? ರಾಜ್ಯ ಸರ್ಕಾರ ರೈತರಿಗೆ ಸಿಗಬೇಕಾದ ಲಾಭವನ್ನು ತಲುಪಿಸುವಲ್ಲಿ ವಿಫಲವಾಗಿರುವುದೇ ಇದಕ್ಕೆ ಕಾರಣ ಎಂದು ಕಿಡಿಕಾರಿದರು.