ಅಧಿಕಾರ ಹಂಚಿಕೆ ಭರವಸೆ: ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ ಬಿಜೆಪಿ MLC ವಿಶ್ವನಾಥ್

Waves of Karnataka


 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆ 50:50 ಅನುಪಾತದಲ್ಲಿ ಒಪ್ಪಂದವಾಗಿದೆ ಎಂಬುದು ಎಲ್ಲರಿಗೂ ತಿಳಿದೇ ಇದೆ. ಇದೀಗ ಕೊಟ್ಟ ಮಾತಿನಿಂದ ಹಿಂದೆ ಸರಿಯುವುದು ದ್ರೋಹಕ್ಕೆ ಸಮಾನವಾಗಿರುತ್ತದೆ ಎಂದು ಎಚ್ಚರಿಸಿದರು.

ಜೆಡಿಎಸ್ ಯಡಿಯೂರಪ್ಪ ಅವರಿಗೆ ಕೊಟ್ಟ ಭರವಸೆಯನ್ನು ಮುರಿದಾಗ ಅದರಿಂದಾಗ ಪರಿಣಾಮಗಳನ್ನು ನಾವು ನೋಡಿದ್ದೇವೆ. ನೀವು ವಚನ ಭ್ರಷ್ಟರಾದರೆ, ಮುಂದೆ ನಾಡಿನ ಆಡಳಿತ ಬಿಜೆಪಿಯ ಪರ ಎನ್ನುವುದುನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿಯಲ್ಲಿದ್ದಾಗಲೂ ಕಾಂಗ್ರೆಸ್ ವಿಷಯಗಳ ಬಗ್ಗೆಯೇಕೆ ಮಾತನಾಡುತ್ತಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ನನ್ನ ರಾಜಕೀಯ ಜೀವನದ 45 ವರ್ಷಗಳನ್ನು ಕಾಂಗ್ರೆಸ್‌ನಲ್ಲಿ ಕಳೆದಿದ್ದೇನೆಂದು ಹೇಳಿದರು.