ಲೋಕಾಯುಕ್ತ ಬಲೆಯಲ್ಲಿ ಜಮೀರ್ ಅಹಮದ್ ಆಪ್ತ: 50ಕ್ಕೂ ಹೆಚ್ಚು ಅಧಿಕಾರಿಗಳಿಂದ ಅಕ್ರಮ ಆಸ್ತಿ ಬೇಟೆ!

Waves of Karnataka


 ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು ಆತನ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿತ್ತು.