ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ನ ಮತಕಳ್ಳತನ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಭೇಟಿಗೂ ಸಮಯ ಕೇಳಿದ್ದಾರೆ.
ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪತ್ರದಲ್ಲಿ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ ಬಿಟ್ಟರೆ ಆಗುವ ಸಮಸ್ಯೆ ಬಗ್ಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಗ್ಗೆಯೂ ಮನವರಿಕೆ ಯತ್ನ ಮಾಡಿದ್ದರು
