ಅಕ್ರಮ ವಲಸಿಗರಿಗೆ ಮನೆಗಳನ್ನು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಚು ರೂಪಿಸುತ್ತಿದ್ದು, ಇದು ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿಯ ಭಾಗ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೋಮವಾರ ಆರೋಪಿಸಿದ್ದಾರೆ.
ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ" ಎನ್ನುವ ಘೋಷವಾಕ್ಯದೊಂದಿಗೆ ಇಂದು ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯಲ್ಲಿ ವಿಜಯೇಂದ್ರ ಅವರು ಮಾತನಾಡಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿ ಕಸಿದುಕೊಳ್ಳಬೇಕೆಂಬ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಮೂಲಕ ಸಿಎಂಗೆ ಧಮ್ಕಿ ಹಾಕಿಸಿ ಅವರೂ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆಂದು ಆರೋಪಿಸಿದರು.
